ಹೈದರಾಬಾದ್: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತೆಯ ಮೇಲೆ ಓರ್ವ ನಕಲಿ ಸಾಧು ನಿರಂತರ ಮೂರು ತಿಂಗಳು ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ 15 ವರ್ಷದ ಬಾಲಕಿಯನ್ನು ಪೋಷಕರು ನಕಲಿ ಸಾಧು ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆತ ಬಾಲಕಿಯನ್ನು ಗುಣಪಡಿಸುವುದಾಗಿ ಭರವಸೆ ನೀಡಿದ್ದ. ಹೀಗಾಗಿ ಕಳೆದ ಮೂರು ತಿಂಗಳಿನಿಂದ ಬಾಲಕಿಯನ್ನು ಆತನ ಬಳಿ ಕರೆದೊಯ್ಯಲಾಗುತ್ತಿತ್ತು. ಆದರೆ ಇತ್ತೀಚೆಗೆ ಸಂತ್ರಸ್ತೆಯು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ತಕ್ಷಣವೇ ವೈದ್ಯರ ಬಳಿಗೆ ಕರೆದುಕೊಂಡ ಹೋದ ಪೋಷಕರಿಗೆ ಆಘಾತ ಕಾದಿತ್ತು.
ಬಾಲಕಿಯನ್ನು ತಪಾಸಣೆ ಮಾಡಿದ ವೈದ್ಯರು ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಸಂತ್ರಸ್ತೆಯ ಪೋಷಕರು ಹಾಗೂ ಗ್ರಾಮಸ್ಥರು ನಕಲಿ ಸಾಧುನನ್ನು ಥಳಿಸಿದ್ದಾರೆ. ಆರೋಪಿಯು ಪ್ರತ್ಯೇಕ ಕೋಣೆಯೊಳಗೆ ಬಾಲಕಿಯನ್ನು ಕರೆದೊಯ್ದು ಧ್ಯಾನ ಮಾಡುವ ಹೆಸರಿನಲ್ಲಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಸಂಬಂಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
14/10/2020 10:24 am