ಲಕ್ನೋ: ವೇಗವಾಗಿ ಬಂದು ಬಸ್‌ವೊಂದು ಪಿಕಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ ಏಳು ಜನರು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ನಡೆದಿದೆ.
ಈ ದುರಂತದಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸುಮಾರು 40ಕ್ಕೂ ಹೆಚ್ಚು ಜನರಿದ್ದ ಬಸ್ ಲಕ್ನೋದಿಂದ ಪಿಲಿಭಿತ್‌ಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಿಕಪ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹೊಲದಲ್ಲಿ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಪಿಕಪ್‌ನಲ್ಲಿದ್ದ ಕೆಲವರು ಗಾಯಗೊಂಡಿದ್ದಾರೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜೊತೆಗೆ ಗಾಯಗೊಂಡ ಎಲ್ಲರಿಗೂ ಸರಿಯಾದ ಚಿಕಿತ್ಸೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
PublicNext
17/10/2020 12:03 pm