ಬೆಂಗಳೂರು: ಬೆಂಗಳೂರು: ಕಾಟನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣೇಶ್ ಎಂಬಾತ, ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ಇರಿದಿದ್ದಾನೆ.
ಈತ ಕೂಲಿ ಕಾರ್ಮಿಕನಾಗಿದ್ದು ಮಟನ್ ಸ್ಟಾಲ್‍ನಿಂದ ಚಾಕುವನ್ನು ತೆಗೆದುಕೊಂಡು ದಾರಿಯಲ್ಲಿ ಸಿಕ್ಕಸಿಕ್ಕವರಿಗೆ ಇರಿದಿದ್ದರಿಂದ ಒಬ್ಬ ಮೃತಪಟ್ಟು, ಐವರು ದಾರಿಹೋಕರು ತೀವ್ರವಾಗಿ ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟ ಓರ್ವ ವ್ಯಕ್ತಿಯನ್ನು ಮಾರಿ (30) ಎಂದು ಗುರುತಿಸಲಾಗಿದೆ.
ಕೃತ್ಯದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಆರೋಪಿ ಆರೋಪಿ ಎಂ.ಗಣೇಶ್(35)ನನ್ನು ಬಂಧಿಸಿ ಚಾಕು ವಶಪಡಿಸಿಕೊಂಡಿದ್ದಾರೆ, ಇಂದು ಬೆಳಗ್ಗೆ 8.30ರ ಸುಮಾರಿನಲ್ಲಿ ಆಂಜನಪ್ಪಗಾರ್ಡ್‍ನ ನಿವಾಸಿ ಎಂ.ಗಣೇಶ್ ಬಾಳೆಕಾಯಿ ಮಂಡಿ ಹತ್ತಿರ ಮಟನ್ ತರಲು ಹೋಗಿದ್ದ. ಆ ಸಂದರ್ಭದಲ್ಲಿ ಮಟನ್ ಶಾಪ್‍ನಲ್ಲಿದ್ದ ಚಾಕುವನ್ನು ತೆಗೆದುಕೊಂಡು ಎದುರಿಗೆ ಸಿಕ್ಕ ಸಿಕ್ಕವರಿಗೆಲ್ಲಾ ಇರಿದಿದ್ದಾನೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಬೆಳಗ್ಗೆ ಗಸ್ತು ತಿರುಗುತ್ತಿದ್ದ ಪಿಎಸ್‍ಐ ಮೂರ್ತಿ, ಕಾನ್‍ಸ್ಟೇಬಲ್ ಶಿವಮೂರ್ತಿ ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸಮಯ ಪ್ರಜ್ಞೆಯಿಂದ ಆರೋಪಿಯನ್ನು ಬಂಧಿಸಿ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಡಿಸಿಪಿ ಸಂಜೀವ್‍ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾಟನ್‍ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಆರೋಪಿ ಈ ಕೃತ್ಯ ಎಸಗಲು ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಮದ್ಯ ಸೇವಿಸಿ ಈ ಕೃತ್ಯ ಎಸಗಿರಬಹುದೆ, ಮಾನಸಿಕ ಅಸ್ಥನೆ ಎಂಬ ಅಂಶಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಗಣೇಶ್‍ನನ್ನು ಎರಡು ವರ್ಷಗಳ ಹಿಂದೆ ಪತ್ನಿ ಬಿಟ್ಟು ಹೋಗಿದ್ದಾಳೆ. ತಾಯಿ ಜತೆ ವಾಸವಾಗಿದ್ದ ಗಣೇಶ್ ಆಕೆಯ ಜತೆಯೂ ಪದೇ ಪದೇ ಜಗಳವಾಡಿ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ.
PublicNext
18/10/2020 03:16 pm