ಕೊಪ್ಪಳ: ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದಂಪತಿ ಅಟ್ಯಾಕ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಮೃತ ಮಹಿಳೆಯ ತಮ್ಮನಿಂದಲೇ ಆಕೆಯ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ವಿನೋದ್ ಹಾಗೂ ತ್ರಿವೇಣಿಯ ಮೇಲೆ ಮಹಿಳೆಯ ಸಹೋದರನಿಂದಲೇ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ.
ತ್ರಿವೇಣಿ ಸಹೋದರ ಅವಿನಾಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬ್ಯಾಂಕ್ ಉದ್ಯೋಗಿಗಳಾಗಿದ್ದ ವಿನೋದ್ ಹಾಗೂ ತ್ರಿವೇಣಿ ದಂಪತಿ ಪ್ರೀತಿಸಿ ಮದುವೆಯಾಗಿದ್ದರು ಇವರ ಮೇಲೆ ನಿನ್ನೆ ರಾಡ್ ನಿಂದ ಮಾರಣಾಂತಿಕ ಹಲ್ಲೆ ನಡೆದಿತ್ತು.
ಹಲ್ಲೆಗೊಳಗಾಗಿದ್ದ ತ್ರಿವೇಣಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡ ವಿನೋದ್ ನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ತನ್ನ ಅಕ್ಕ ವಿನೋದ್ ನನ್ನು ಪ್ರೀತಿಸಿ ಮದುವೆಯಾದ ಸಿಟ್ಟಿಗೆ ಅವಿನಾಶ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಸದ್ಯ ತ್ರಿವೇಣಿ ಸಹೋದರ ಅವಿನಾಶ್ ನನ್ನು ವಶಕ್ಕೆ ಪಡೆದ ಪೊಲೀಸರು ಇನ್ನುಳಿದ ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ.
PublicNext
18/10/2020 06:44 pm