ಹೊಶಿಯಾರ್ ಪುರ(ಪಂಜಾಬ್)- ಅತ್ಯಾಚಾರದ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆದು ಅಪರಾಧಿಗಳಿಗೆ ಕಠಿಣ ಶಿಕ್ಷೆ ಜಾರಿ ಮಾಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.
ಇತ್ತೀಚೆಗೆ ಪಂಜಾಬ್ ರಾಜ್ಯದ ಹೊಶಿಯಾರ್ ಪುರ ಪ್ರಾಂತ್ಯದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆಯನ್ನು ಖಂಡಿಸಿದ ಸಿಎಂ ಅಮರಿಂದರ್ ಸಿಂಗ್ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ತ್ವರಿತ ಗತಿಯಲ್ಲಿ ನಡೆಸಿ ಅತ್ಯಾಚಾರವೆಸಗಿದ ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಘಟನೆಯ ಬಗ್ಗೆ ಚುರುಕಿನ ತನಿಖೆ ನಡೆಸಿ ಸಂತ್ರಸ್ಥೆಯ ಕುಟುಂಬಕ್ಕೆ ನ್ಯಾಯ ಒದಗಿಸಲು ನೆರವಾಗಬೇಕೆಂದು ಪಂಜಾಬ್ ಡಿಜಿಪಿಯವರಿಗೆ ಆದೇಶಿಸಲಾಗಿದೆ.
PublicNext
23/10/2020 01:02 pm