ಚಂಡೀಗಢ: ನಿಖಿತಾ ತೋಮರ್ ಎಂಬ 21 ವರ್ಷದ ಯುವತಿ ಗುಂಡಿಗೆ ಬಲಿಯಾಗಿರುವ ಘಟನೆ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಕ್ಕೆ ಬರುತ್ತಿದ್ದ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ನಿಖಿತಾ ತೋಮರ್ ಎಂಬ 21 ವರ್ಷದ ಯುವತಿ ಗುಂಡಿಗೆ ಬಲಿಯಾಗಿದ್ದಾಳೆ.
ಪರೀಕ್ಷೆ ಮುಗಿಸಿ ಈಕೆ ಕಾಲೇಜಿನಿಂದ ಹೊರಬರುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆರೋಪಿ ಆಕೆಯನ್ನು ಬಲವಂತಾಗಿ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ.
ಈ ವೇಳೆ ಯುವತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿಗೆ ಮತ್ತೊಬ್ಬ ಸಾಥ್ ನೀಡಿದ್ದು, ಯುವತಿ ಮೇಲೆ ಗುಂಡು ಹಾರಿಸಿದ್ದಾರೆ.
ಆರೋಪಿಗಳು ಯುವತಿ ಮೇಲೆ ಗುಂಡು ಹಾರಿಸಿ ವಾಹನ ಹತ್ತಿ ಪರಾರಿಯಾಗಿದ್ದಾರೆ. ಇತ್ತ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ.ಇನ್ನೂ ಈ ಪ್ರಕರಣ ಲವ್ ಜಿಹಾದ್ ಎಂದು ವರದಿಯಾಗಿದೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ.
ಇನ್ನೂ ಒಂದು ದಿನದ ಹಿಂದೆ ಯುವತಿ ಪೊಲೀಸ್ ಠಾಣೆಯಲ್ಲಿ ತೌಫೀಕ್ ಅಲಿಯಾಸ್ ಸಾಜಿದ್ ಎಂಬುವವನು ನನಗೆ ಇಸ್ಲಾಂ ಧರ್ಮವನ್ನು ಸ್ವೀಕರಿಸಲು ಮತ್ತು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ದೂರು ನೀಡಿದ್ದಳು.
ಯುವತಿಯ ದೂರು FIR ನಲ್ಲಿ ರಿಜಿಸ್ಟರ್ ಆಗಿದೆ.
ಆದ್ರೆ ಇಷ್ಟಕ್ಕೇ ಸುಮ್ಮನಾಗದ ಆ ಯುವಕರು ಯುವತಿಗೆ ಜ್ಯೂಸ್ ನಲ್ಲಿ ಮತ್ತಿನ ಅಂಶವಿರುವ ಪದಾರ್ಥ ಸೇರಿಸಿ ಅಪಹರಿಸಲು ಯತ್ನಸಿ ಕೊನೆಗೆ ಗುಂಡು ಹಾರಿಸಿ ಪಾರಾರಿಯಾಗಿದ್ದಾರೆ.
PublicNext
27/10/2020 02:16 pm