ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ನಾಪತ್ತೆ?

ಬೆಂಗಳೂರು- ನಗರದ ಡಿಜೆ ಹಳ್ಳಿ, ಕೆ ಜೆ ಹಳ್ಳಿ ಪ್ರದೇಶದಲ್ಲಿ ಗಲಭೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಪಕ್ಷದ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ‌.

ಆಸ್ಪತ್ರೆಯಲ್ಲಿದ್ದುಕೊಂಡೇ ಕೊರೊನಾ ಪಾಸಿಟಿವ್ ಇದೆ ಎಂಬ ನಕಲಿ ವರದಿ ಕೊಟ್ಟಿದ್ದ ಸಂಪತ್ ರಾಜ್ ಬಂಧನದಿಂದ ತಪ್ಪಿಸಿಕೊಂಡಿದ್ದರು‌. ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಅಲ್ಲಿ ತಮ್ಮ ಬಳಸಿ ಅಲ್ಲಿಂದಲೇ ಸತತ ಎರಡು ತಿಂಗಳು ಕೊರೊನಾ ಪಾಸಿಟಿವ್ ವರದಿ ವೈದ್ಯರ ಮೂಲಕ ಪೊಲೀಸರಿಗೆ ಕಳುಹಿಸಿದ್ದರು ಎನ್ನಲಾಗಿದೆ.

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮನೆಗೆ ಬೆಂಕಿ ಹಚ್ಚಿಸಿದ್ದಾರೆಂಬ ಆರೋಪ ಸಂಪತ್ ರಾಜ್ ಮೇಲಿದೆ‌. ಸದ್ಯ ನಾಪತ್ತೆಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಕೇರಳ ಮಾರ್ಗದಲ್ಲಿ ಹೋಗಿದ್ದಾರೆ ಎನ್ನಲಾಗಿದೆ‌. ಅವರ ಪತ್ತೆಗೆ ಸಿಸಿಬಿ ಪೊಲೀಸರು ಫೀಲ್ಡಿಗೆ ಇಳಿದಿದ್ದಾರೆ.

Edited By : Nagaraj Tulugeri
PublicNext

PublicNext

30/10/2020 03:58 pm

Cinque Terre

89.35 K

Cinque Terre

1