ಡಬ್ಲಿನ್: (ಐರ್ಲೆಂಡ್) ಬೆಂಗಳೂರು ಮೂಲದ ಮಹಿಳೆ ಮತ್ತು ಇಬ್ಬರು ಮಕ್ಕಳು ನಿಗೂಢವಾಗಿ ಐರ್ಲೆಂಡಿನಲ್ಲಿ ಸಾವನ್ನಪ್ಪಿದ್ದಾರೆ.
ಸೀಮಾ ಬಾನು(37), ಮಗಳು ಅಫ್ರಿಯಾ(11) ಮಗ ಫಜಾನ್(06) ದಕ್ಷಿಣ ಡಬ್ಲಿನ್‌ನಲ್ಲಿರುವ ಬ್ಯಾಲಿಂಟೀರ್ ಲೆವೆಲಿನ್ ಎಸ್ಟೇಟ್ ನಲ್ಲಿರುವ ಮನೆಯಲ್ಲಿ ಮೃತಪಟ್ಟಿದ್ದಾರೆ.
ಹಲವು ವರ್ಷಗಳ ಹಿಂದೆ ಸೀಮಾ ಬಾನು ಬೆಂಗಳೂರು ಅಥವಾ ಮೈಸೂರಿನಿಂದ ಡಬ್ಲಿನ್‌ಗೆ ಆಗಮಿಸಿದ್ದರು ಎಂದು ಅಲ್ಲಿನ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಬ್ಬರು ಮಕ್ಕಳು ಒಂದು ಕೊಠಡಿಯಲ್ಲಿ, ತಾಯಿಯ ಶವ ಮತ್ತೊಂದು ಕೊಠಡಿಯಲ್ಲಿ ಪತ್ತೆಯಾಗಿದೆ. ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸೀಮಾ ಬಾನು ಹಾಗೂ ಮಕ್ಕಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಬೇಕಿದೆ.
PublicNext
30/10/2020 10:16 pm