ಬೆಂಗಳೂರು- ನಗರದ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರದೇಶಗಳ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗೆ ಸಿಸಿಬಿ ಪೊಲೀಸರ ವಿಶೇಷ ತಂಡ ರಚನೆಯಾಗಿದೆ. ಬಂಧನ ಭೀತಿಯಿಂದ ಆಸ್ಪತ್ರೆಯಿಂದಲೇ ನಾಪತ್ತೆಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಅವರ ಕುಟುಂಬದ ಎಲ್ಲ ಸದಸ್ಯರ ಫೋನ್ ಸ್ವಿಚ್ ಆಫ್ ಆಗಿದೆ. ಆದರೂ ಮಹತ್ವದ ಸುಳಿವನ್ನು ಸಿಸಿಬಿ ಪೊಲೀಸರು ಕಲೆ ಹಾಕಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸಿಸಿಬಿ ಪೊಲೀಸರು ಸಂಪತ್ ರಾಜ್ ಅವರನ್ನು ಬಂಧಿಸುವ ಸಾಧ್ಯತೆ ಇದೆ.
ಕೊರೊನಾ ಸೋಂಕು ತಗುಲಿದೆ ಎಂದು ಸಂಪತ್ ರಾಜ್ ಬೆಂಗಳೂರಿನ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ನಮ್ಮ ಗಮನಕ್ಕೆ ತರದೇ ಸಂಪತ್ ರಾಜ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವಂತಿಲ್ಲ ಎಂದು ಸಿಸಿಬಿ ಪೊಲೀಸರು ಆಸ್ಪತ್ರೆ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದರು. ಆದ್ರೆ ಸಂಪತ್ ರಾಜ್ ಅಲ್ಲಿಂದಲೇ ರಾತ್ರೋ ರಾತ್ರಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಬ್ಯಾಪಿಸ್ಟ್ ಆಸ್ಪತ್ರೆ ಆಡಳಿತ ಮಂಡಳಿಗೆ ನೊಟೀಸ್ ನೀಡಲಾಗಿದೆ.
PublicNext
31/10/2020 12:44 pm