ಬೆಂಗಳೂರು: ಡಿಜೆಹಳ್ಳಿ, ಕೆಜಿಹಳ್ಳಿ ಗಲಭೆ ಕೇಸ್‌ನ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್‌ರಾಜ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯ ಡಾ.ಡಾಮ್ನಿಕ್ ಬೆಂಜಮಿನ್ ಅವರಿಗೆ ನೋಟಿಸ್ ನೀಡಲಾಗಿದ್ದು, ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸಂಪತ್‌ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಜಾಕೀರ್ ಅವರು ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಗಲಭೆ ಪ್ರಕರಣದ ಆರೋಪಿಗಳೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
PublicNext
01/11/2020 07:52 pm