ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮನೆಗಳಿಗೆ ಬೆಂಕಿ

ಢಾಕಾ: ಬಾಂಗ್ಲಾದೇಶದ ಕ್ಯುಮಿಲ್ಲಾದ ಮುರಾದ್‌ನೋಜರ್‌ನಲ್ಲಿ ಫೇಸ್‌ಬುಕ್ ಪೋಸ್ಟ್ ನಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಲಾಗಿದೆ ಎಂಬ ವದಂತಿಗಳ ಕಾರಣ ಉದ್ರಿಕ್ತ ಸ್ಥಳೀಯರು ಅಲ್ಪಸಂಖ್ಯಾತರ ಮನೆಗಳನ್ನು ಧ್ವಂಸ ಮಾಡಿದ್ದಾರೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬಂಗ್ರಾ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿ ಕಮುರುಜಾಮನ್ ಟಲುಕ್ದರ್ ತಿಳಿಸಿದ್ದಾರೆ.

ಬಂಧಿತ ಇಬ್ಬರು ವ್ಯಕ್ತಿಗಳಲ್ಲಿ ಪುರ್ಬೊ ಧೌರ್ ನಲ್ಲಿರುವ ಶಿಶುವಿಹಾರ ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಹತ್ತಿರದ ಆಂಡಿಕೋಟ್ ಗ್ರಾಮದ ನಿವಾಸಿ ಸೇರಿದ್ದಾರೆ. ಅಲ್ಲಿನ ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದೆ ಎಂದು ಈ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಕ್ಯುಮಿಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮದ್ ಅಬುಲ್ ಫಜಲ್ ಮಿರ್ ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕ ಸೈಯದ್ ನೂರುಲ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬಂಧಿತ ಇಬ್ಬರ ಮನೆಗಳು ಸೇರಿದಂತೆ ಮೂರು ಮನೆಗಳಿಗೆ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ

Edited By : Nagaraj Tulugeri
PublicNext

PublicNext

02/11/2020 06:43 pm

Cinque Terre

40.86 K

Cinque Terre

4