ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದ ಸದಸ್ಯ. ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಕಳೆದ ರಾತ್ರಿ ಶಿವಲಿಂಗಪ್ಪ ಭೂಶೆಟ್ಟಿಯವರು ಮನೆಯ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
03/11/2020 10:47 am