ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದುತ್ವವಾದಿಗಳ ತಲೆ ಬಿಸಿ- ಅಮಿತಾಬ್ ಬಚ್ಚನ್ ಕಸಿವಿಸಿ

ಮುಂಬೈ: ಬಾಲಿವುಡ್ ಬಾದ್ ಷಾ ಅಮಿತಾಬ್ ಬಚ್ಚನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಬಿಗ್‍ಬಿ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಶಾಸಕ ಅಭಿಮನ್ಯು ಪವಾರ್ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಿ ಹಾಗೂ ಕಾರ್ಯಕ್ರಮ ನಡೆಸಿದ ಚಾನೆಲ್ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ.

ಅಮಿತಾಬ್ ನಿರೂಪಣೆಯ ಕೌನ್ ಬನೇಗಾ ಕರೋಡ್‍ಪತಿ ಕಾರ್ಯಕ್ರಮದಲ್ಲಿ ಶುಕ್ರವಾರ ಕರ್ಮವೀರ್ ವಿಶೇಷ ಎಪಿಸೋಡ್ ಪ್ರಸಾರ ಮಾಡಲಾಗಿತ್ತು. ಬಿಗ್ ಬಿ 6,40,000 ರೂಪಾಯಿಯ ನಗದು ಬಹುಮಾನಕ್ಕಾಗಿ ಪ್ರಶ್ನೆಯೊಂದನ್ನು ಕೇಳಿದರು. ಇದೇ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಹಾಗಾದ್ರೆ ಬಚ್ಚನ್ ಕೇಳಿದ ಪ್ರಶ್ನೆ ಏನು?:

1927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆ: ಎ. ವಿಷ್ಣುಪುರಾಣ, ಬಿ. ಭಗವದ್ಗೀತೆ, ಸಿ. ಋಗ್ವೇದ, ಡಿ. ಮನುಸ್ಮೃತಿ

ಸ್ಪರ್ಧೆಯಲ್ಲಿ ಭಾಗವಹಿಸಿದವರು ಮನುಸ್ಮೃತಿಯನ್ನು ಉತ್ತರವಾಗಿ ಹೇಳಿದರು. ಈ ವೇಳೆ ಬಿಗ್ ಬಿ ಇದು ಸರಿ ಉತ್ತರವೆಂದು ಘೋಷಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಾಚೀನ ಹಿಂದೂ ಧರ್ಮ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು ಎಂದು ವಿವರಿಸಿದರು. ಇದೇ ಸಂಗತಿ ಈಗ ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈಗಾಗಲೇ ನೆಟ್ಟಿಗರು ಟ್ವಿಟ್ಟರಿನಲ್ಲಿ ಕಿಡಿಕಾರಿದ್ದಾರೆ. ಇದು ಹಿಂಡುಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆಕ್ರೋಶಿತರಾಗಿದ್ದಾರೆ.

Edited By : Nagaraj Tulugeri
PublicNext

PublicNext

03/11/2020 04:01 pm

Cinque Terre

74.12 K

Cinque Terre

7