ಹಾಸನ: ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪವಾಗಿ ಸಾವನ್ನಪ್ಪಿದ್ದು, ಹೆಣ್ಣು ಮಗು ಹೆತ್ತಿದ್ದಕ್ಕೆ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೂಳಿಹೊನ್ನೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೆಟ್ಟೇಕೆರೆ ಗ್ರಾಮದ ಲಕ್ಷ್ಮಿದೇವಿ(22)ಯನ್ನು ಗೂಳಿಹೊನ್ನೇನಹಳ್ಳಿ ಗ್ರಾಮದ ಗುರುರಾಜ ಎಂಬಾತನ ಜೊತೆ ಒಂದೂವರೆ ವರ್ಷದ ಹಿಂದೆ ಮದುವೆ ಮಾಡಿ ಕೊಡಲಾಗಿತ್ತು. ಲಕ್ಷ್ಮಿದೇವಿಗೆ ಕಳೆದ 11 ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಹೆಣ್ಣು ಮಗುವಾದ ನಂತರ ಗಂಡನ ಮನೆಯವರು ಕಿರುಕುಳ ನೀಡಲಾರಂಭಿಸಿದ್ದರು ಎಂದು ಮೃತಳ ತಂದೆ ಶಿವಲಿಂಗೇಗೌಡ ಆರೋಪಿಸಿದ್ದಾರೆ.
ಹೆಣ್ಣು ಮಗು ಹೆತ್ತಿದ್ದೀಯಾ ಹೀಗಾಗಿ 5 ಲಕ್ಷ ಹಣ ತರಬೇಕು. ಇಲ್ಲದಿದ್ದರೆ ನಿಮ್ಮ ತವರು ಮನೆಗೆ ವಾಪಸ್ ಹೋಗು ಎಂದು ನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಘಟನೆ ನಂತರ ಮೃತಳ ಪತಿ ಮನೆಯವರು ನಾಪತ್ತೆಯಾಗಿದ್ದಾರೆ. ಹೀಗಾಗಿ ಮೃತಳ ಶವವನ್ನು ಗಂಡನ ಮನೆ ಮುಂದೆಯಿಟ್ಟು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.
PublicNext
03/11/2020 05:30 pm