ಹೈದರಾಬಾದ್: 2,250ರೂ. ಪಿಂಚಣಿ ಹಣಕ್ಕಾಗಿ 92 ವರ್ಷದ ವೃದ್ಧನೊಬ್ಬ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಅಮೃತಲೂರು ಬ್ಲಾಕ್‌ನ ಯಲವರ್ರು ಗ್ರಾಮದಲ್ಲಿ ನಡೆದಿದೆ.
ಎಂ.ಸ್ಯಾಮ್ಯುಯೆಲ್ ಆರೋಪಿ ವೃದ್ಧ ಪತ್ನಿ ಅಪ್ರಾಯಮ್ಮ(90)ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಂಧ್ರ ಸರ್ಕಾರದ ನಿಯಮದ ಪ್ರಕಾರ ಪ್ರತಿ ಕುಟುಂಬದ ಒಬ್ಬ ಹಿರಿಯ ಸದಸ್ಯ 2,250 ರೂ. ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಸ್ಯಾಮ್ಯುಯೆಲ್ ಪತ್ನಿ ಅಪ್ರಾಯಮ್ಮ ಅವರು ಪ್ರತಿ ತಿಂಗಳ ಮೊದಲ ವಾರದಲ್ಲಿ ಹಣವನ್ನು ಸ್ವೀಕರಿಸಲು ನೋಂದಾವಣೆ ಮಾಡಿದ್ದರು.
ಸ್ಯಾಮ್ಯುಯೆಲ್ ದಂಪತಿ ಕಾನೂನುಬದ್ಧವಾಗಿ ವಿಚ್ಛೇದನ ಪಡೆಯದೆ 10 ವರ್ಷಗಳಿಂದ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಹೀಗಾಗಿ ನವೆಂಬರ್ 1ರಂದು ಸ್ಯಾಮ್ಯುಯೆಲ್ ತನ್ನ ಪಾಲನ್ನು ತೆಗೆದುಕೊಳ್ಳುವ ಸಲುವಾಗಿ ಪತ್ನಿಯನ್ನು ಭೇಟಿಯಾಗಲು ಹೋಗಿದ್ದ. ಈ ವೇಳೆ ಸ್ವಲ್ಪ ಹಣ ಕೊಟ್ಟಿದ್ದರಿಂದ ಸಿಟ್ಟಾದ ಸ್ಯಾಮ್ಯುಯೆಲ್ ಅಲ್ಲಿಂದ ಕೋಪಗೊಂಡು ಹೊರಟು ಹೋಗಿದ್ದ. ಆದರೆ ಮರುದಿನ ಬೆಳಗ್ಗೆ ವಾಪಸ್ ಬಂದು ಅಪ್ರಾಯಮ್ಮನನ್ನು ವಾಕಿಂಕ್ ಸ್ಟಿಕ್‌ನಿಂದ ಹೊಡೆದು ಕೊಲೆಗೈದಿದ್ದಾನೆ.
PublicNext
04/11/2020 03:52 pm