ಮುಂಬೈ: ಬಂಧಿಸಲು ಹೋದ ತಂಡದಲ್ಲಿದ್ದ ಮಹಿಳಾ ಪೊಲೀಸ್ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇಂಟೀರಿಯರ್ ಡಿಸೈನರ್ ಆಗಿದ್ದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ 2018ರ ಮೇ ತಿಂಗಳಲ್ಲಿ ಆಲಿಬಾಗ್ನಲ್ಲಿ ಆತ್ಮಹತ್ಯೆ ಶರಣಾಗಿದ್ದರು. ಈ ವೇಳೆ ದೊರೆತ ಪತ್ರದಲ್ಲಿ ‘ಅರ್ನಬ್ ಗೋಸ್ವಾಮಿ, ಫಿರೋಜ್ ಶೇಖ್ ಮತ್ತು ನಿತೀಶ್ ಸರ್ದಾ ಅವರು 5.40 ಕೋಟಿ ರೂ. ಪಾವತಿಸಿಲ್ಲ' ಎಂದು ಗಂಭೀರ ಆರೋಪ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ತಂಡ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದೆ. ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಲು ಪೊಲೀಸರ ತಂಡ ಮುಂಬೈನಲ್ಲಿರುವ ಅವರ ನಿವಾಸಕ್ಕೆ ತೆರಳಿತ್ತು. ಈ ವೇಳೆ ಅರ್ನಬ್ ಅವರು ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಎಫ್ಆಐರ್ ದಾಖಲಿಸಲಾಗಿದೆ.
PublicNext
04/11/2020 09:21 pm