ಚಿತ್ರದುರ್ಗ: ಕೆಎಸ್ಆರ್‌ಟಿಸಿ ಬಸ್ ಪಲ್ಟಿ ಹೊಡೆದು ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಭಾನುವಾರ ನಸುಕಿನ ಜಾವ 4:30ರ ಸುಮಾರಿಗೆ ನಡೆದಿದೆ.
ಯಾದಗಿರಿ ಮೂಲದ ಬಸವರಾಜ್ (32) ಹಾಗೂ ಐಶ್ವರ್ಯ (12) ಮೃತ ದುರ್ದೈವಿಗಳು. ಈ ದುರ್ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ರಸ್ತೆಯ ಎಡಭಾಗಕ್ಕೆ ಪಲ್ಟಿಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಬಸ್ಸಿನಲ್ಲಿ ಮಕ್ಕಳು ಸೇರಿದಂತೆ ಸುಮಾರು 50 ಪ್ರಯಾಣಿಕರಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಹಿರಿಯೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.
PublicNext
06/12/2020 07:59 am