ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ಅಪಘಾತ: ಹೊತ್ತಿ ಉರಿದ ಕಾರು- ಜನರ ಎದುರೇ ಐವರು ಸಜೀವ ದಹನ

ಲಕ್ನೋ: ಕಂಟೈನರ್‌ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜನರ ಎದುರೇ ಐವರು ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಲಕ್ನೋ ಸಮೀಪದ ಯುಮನಾ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರು ಲಕ್ನೋದಿಂದ ದೆಹಲಿ ಕಡೆ ಪ್ರಯಾಣಿಸುತ್ತಿತ್ತು. ಈ ವೇಳೆ ಎದುರಿಗೆ ಬಂದ ಕಂಟೈನರ್​ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ದುರ್ಘಟನೆ ನಡೆದಿದೆ. ಆದರೆ ಕಾರಿನಲ್ಲಿದ್ದವರು ಹೊರಕ್ಕೆ ಬರಲಾಗದೇ ಪರದಾಡುತ್ತಿದ್ದರು.

ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳೀಯರು ಕಾರಿನಲ್ಲಿದ್ದವರ ರಕ್ಷಣೆಗೆ ಮುಂದಾಗಲಿಲ್ಲ. ಬಳಿಕ ಅಗ್ನಿಶಾಮಕದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಒಂದು ಗಂಟೆ ಬಿಟ್ಟು ಬರುವಷ್ಟರಲ್ಲಿ ಕಾರಿನಲ್ಲಿದ್ದವರೆಲ್ಲರೂ ಸಜೀವ ದಹನವಾಗಿದ್ದಾರೆ.

Edited By : Vijay Kumar
PublicNext

PublicNext

22/12/2020 05:30 pm

Cinque Terre

123.86 K

Cinque Terre

2

ಸಂಬಂಧಿತ ಸುದ್ದಿ