ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈಲು ಬರುತ್ತಿದ್ದಂತೆ ಹಳಿಗೆ ಬಿದ್ದರು : ಬಾರದ ಲೋಕಕ್ಕೆ ಅಪ್ಪ,ಬದುಕುಳಿದ ಮಗ

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಠಲವಾಡಿ ರೈಲ್ವೆ ನಿಲ್ದಾಣದಲ್ಲಿ ತಂದೆಯೊಬ್ಬರು ತಮ್ಮ 6 ವರ್ಷದ ಮಗನೊಂದಿಗೆ ರೈಲು ಬರುತ್ತಿದ್ದಂತೆ ಹಳಿಗೆ ಹಾರಿದ್ದಾರೆ.

ಈ ಭಯಾನಕ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ತಂದೆ ಸಾವನ್ನಪ್ಪಿದ್ದು, ಮಗ ಪವಾಡಸದೃಶವಾಗಿ ಬದುಕುಳಿದಿದ್ದಾರೆ.

ಭರತ್ ಘಂಡಟ್ ಎಂಬ ಟ್ವಿಟ್ಟರ್ ಬಳಕೆದಾರರು ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಸ್ಥಳೀಯ ವರದಿ ಪ್ರಕಾರ ಮಗು ಸಣ್ಣಗಾಯವೂ ಆಗದೇ ಸುರಕ್ಷಿತವಾಗಿದ್ದು, ತಂದೆಯ ದೇಹ ಹಳಿಗೆ ಸಿಲುಕಿ ಛಿದ್ರ ಛಿದ್ರವಾಗಿದೆ.

ಇನ್ನು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನುಬೃಹತ್ ಮುಂಬೈ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಮೋದ್ ಅಂಧಲೆ ಎಂದು ಗುರುತಿಸಲಾಗಿದೆ. ಡೆಕ್ಕನ್ ಎಕ್ಸ್ ಪ್ರೆಸ್ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Edited By : Manjunath H D
PublicNext

PublicNext

18/02/2022 04:45 pm

Cinque Terre

60.53 K

Cinque Terre

0

ಸಂಬಂಧಿತ ಸುದ್ದಿ