ಶಿವಮೊಗ್ಗ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸೇರಿ ಮೂವರು ಮೃತಪಟ್ಟಿದ್ದು, 11 ತಿಂಗಳ ಮಗು ಪವಾಡ ರೀತಿಯಲ್ಲಿ ಪಾರಾದ ಘಟನೆ ಜಿಲ್ಲೆಯ ಲಕ್ಕವಳ್ಳಿ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.
ಕುಂದಾಪುರ ತಾಲೂಕಿನ ನೇರಂಬಳ್ಳಿ ನಿವಾಸಿ ಅನಿಲ್‌ಕುಮಾರ್(30) ಅವರ ಪತ್ನಿ ಸುಜೀತಾ (26) ಮತ್ತು ಕೋಡಿ ಗ್ರಾಮದ ನಾಗೇಂದ್ರ (26) ಮೃತ ದುರ್ದೈವಿಗಳು. ಅನಿಲ್‌ಕಮಾರ್, ಸುಜಾತಾ ದಂಪತಿಯ 11 ತಿಂಗಳ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮತ್ತೊಂದು ಕಾರಿನಲ್ಲಿದ್ದ ಕರಕುಚ್ಚಿ ಗ್ರಾಮದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಕವಳ್ಳಿ ಸಮೀಪದ ಹಲಸೂರು ಮತ್ತು ರಂಗೇನಹಳ್ಳಿ ಗ್ರಾಮಗಳ ನಡುವಿನ ಕೆರೆ ಏರಿ ಮೇಲೆ ಮುಖಾಮುಖಿ ಅಪಘಾತ ಸಂಭವಿಸಿಸಡ. ಪರಿಣಾಮ ಕಾರಿನ ಚಾಲಕ ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅನಿಲ್‌ಕುಮಾರ್ ದಂಪತಿಯನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದಂಪತಿ ಮೃತಪಟ್ಟಿದ್ದಾರೆ.
ಈ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
10/01/2021 02:53 pm