ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಕ್-ಕಾರು ಮುಖಾಮುಖಿ ಡಿಕ್ಕಿ- ಇಬ್ಬರು ಸಾವು, ಹೊತ್ತಿ ಉರಿದ ಬೈಕ್

ರಾಯಚೂರು: ಬೈಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್‌ನಲ್ಲಿ ನಡೆದಿದೆ.

ಅಂದಪ್ಪ ಕುಣೆಕೆಲ್ಲೂರು(34) ಹಾಗೂ ಗದ್ದೆಪ್ಪ ಕುಣೆಕೆಲ್ಲೂರು(28) ಮೃತ ದುರ್ದೈವಿಗಳು. ಅಪಘಾತದ ರಭಸಕ್ಕೆ ಬೈಕಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಕೂಡ ಜಖಂ ಆಗಿದೆ. ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

18/01/2021 07:25 am

Cinque Terre

103.37 K

Cinque Terre

0