ಕೋಲ್ಕತ್ತಾ: ಮಂಜು ಕವಿದ ರಸ್ತೆಯಲ್ಲಿ ಪ್ರಯಾಣಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ 13 ಜನ ಸಾವನ್ನಪ್ಪಿದ ದುರ್ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ಅಪಘಾತ ಸಂಭವಿಸಿದ್ದು, 13 ಜನರು ಮೃತಪಟ್ಟಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
PublicNext
20/01/2021 08:08 am