ಚೆನ್ನೈ: ಮನುಷ್ಯರ ಕ್ರೂರ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಕಾಡಾನೆಗೆ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆಗೆ ಸಂಬಂಧಿಸಿದಂತೆ ಐಷಾರಾಮಿ ರೆಸಾರ್ಟ್ ಅನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ.
ಆನೆ ಎಸ್ಟೇಟ್ ಒಳಗೆ ಹೋಗಲು ಪ್ರಯತ್ನ ಮಾಡಿದಾಗ ಎಸ್ಟೇಟ್ ಕಾವಲುಗಾರರಾದ ರೆಹಮಾನ್ ಮತ್ತು ಪ್ರಶಾಂತ್ ಟೈರ್ ಗೆ ಬೆಂಕಿ ಹಚ್ಚಿ ಅದನ್ನು ಆನೆಯ ಮೇಲೆ ಎಸೆದು ದುಷ್ಕೃತ್ಯ ಎಸಗಿದ್ದಾರೆ.
ಪರವಾನಗಿ ನವೀಕರಿಸದೆ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿರುವುದಲ್ಲದೆ ಆನೆಯ ಮೇಲೆ ಬೆಂಕಿ ಎಸೆದು ವಿಕೃತಿ ಮೆರೆದಿದ್ದಾರೆ.
ಇನ್ನು ಅಸ್ವಸ್ಥವಾಗಿದ್ದ ಆನೆಯನ್ನು ಅರಣ್ಯ ಸಿಬ್ಬಂದಿ ಕಂಡಿದ್ದು, ವೈದ್ಯಕೀಯ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ. ಆದರೆ ಅದಾಗಲೇ ಸುಟ್ಟ ಗಾಯದಿಂದ ಸಾಕಷ್ಟು ನೋವುಂಡಿದ್ದ ಆನೆ ಕೊನೆಯುಸಿರೆಳೆದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಲಾಗಿದೆ.
PublicNext
23/01/2021 12:16 pm