ಮುಂಬೈ: ವಾಹನವೊಂದು 400 ಅಡಿ ಆಳದ ಕಮರಿಗೆ ಉರುಳಿಬಿದ್ದ ಪರಿಣಾಮ 6 ಮಂದಿ ಮೃತಪಟ್ಟಿದ್ದು, 18 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದರ್ಬಾರ್ ಜಿಲ್ಲೆಯಲ್ಲಿ ನಡೆದಿದೆ.
ಖಾಡ್ಕಿ ಘಾಟ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 10.30ರ ವೇಳೆಗೆ ಈ ಘಟನೆ ನಡೆದಿದೆ. ಮೃತರೆಲ್ಲರೂ ಝಾಪಿ ಫಲಾಯಿ ಗ್ರಾಮದ ನಿವಾಸಿಗಳಾಗಿದ್ದು, ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮಹೀಂದ್ರಾ ಮ್ಯಾಕ್ಸ್ ವಾಹನದಲ್ಲಿ ಸುಮಾರು 24 ಮಂದಿ ಕಾರ್ಮಿಕರು ತೋರನ್ಮಾಲ್ಗೆ ತೆರಳುತ್ತಿದ್ದರು. ಏಕಾಏಕಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
23/01/2021 07:30 pm