ಕೋಲಾರ: ಚಾಲಕನ ನಿಯಂತ್ರಣ ತಪ್ಪಿ 60 ವಿದ್ಯಾರ್ಥಿಗಳಿದ್ದ ಶಾಲಾ ವಾಹನ ಪಲ್ಟಿಯಾಗಿ ಭಾರೀ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಮುಳಬಾಗಿಲು ಪಟ್ಟಣದ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯ ವಾಹನ ಅಪಘಾತಕ್ಕಿಡಾಗಿದ್ದು, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಗಾಯಾಳು ಮಕ್ಕಳನ್ನು ಕೋಲಾರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ನಂಗಲಿ, ವಡ್ಡಹಳ್ಳಿ ಗ್ರಾಮದಿಂದ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಇಲ್ಲ, ಚಾಲಕ ಸೇರಿ ಕೆಲ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
PublicNext
25/01/2021 02:46 pm