ನವದೆಹಲಿ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ಲಾರಿ ಹಾಗೂ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ನಡೆದಿದ್ದು, 10 ಜನ ಸಾವನ್ನಪ್ಪಿದ್ದಾರೆ.
ಹುಸೈನ್‍ಪುರದ ಕುಂದರ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ದಟ್ಟ ಮಂಜು ಆವರಿಸಿದ್ದರಿಂದ ದಾರಿ ಕಾಣದೆ ಬಸ್, ಟ್ರಕ್ ಹಾಗೂ ಮತ್ತೊಂದು ವಾಹನದ ನಡುವೆ ಶನಿವಾರ ನಸುಕಿನಜಾವ ಡಿಕ್ಕಿ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಅಂತ್ಯವಾಗಿದ್ದು, ವಿಧಿವಿಜ್ಞಾನ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ದುರ್ಘಟನೆಯಲ್ಲಿ ಸುಮಾರು 25 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ 2 ಲಕ್ಷ ರೂ., ಗಾಯಗೊಂಡವರ ಕುಟುಂಬದವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
PublicNext
30/01/2021 12:26 pm