ಭುವನೇಶ್ವರ: ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಆಗುತ್ತಿದ್ದ 12 ಮಂದಿ ದುರ್ಮರಣಕ್ಕೆ ತುತ್ತಾದ ಘಟನೆ ಒಡಿಶಾದ ಕೊರಪುತ್ ಜಿಲ್ಲೆಯ ಮುರ್ತಾಹಂಡಿ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಪಿಕ್ಆಪ್ ವಾಹನದಲ್ಲಿ 35 ಜನರು ಸಂಬಂಧಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಒಡಿಶಾದ ಕೊರಪುತ್ ಜಿಲ್ಲೆಯ ಸಿಂಧಿಗುಡ ಗ್ರಾಮಕ್ಕೆ ತೆರಳಿದ್ದರು. ಅಂತ್ಯಸಂಸ್ಕಾರದ ಬಳಿಕ ಗ್ರಾಮಕ್ಕೆ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ವಾಹನ ಪಲ್ಟಿ ಹೊಡೆದಿದೆ. ಪರಿಣಾಮ 12 ಮಂದಿ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ್ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ವಾಹನದಲ್ಲಿದ್ದ ಎಲ್ಲರೂ ಚಂಡೀಗಢ ಮೂಲದವರಾಗಿದ್ದಾರೆ. ಘಟನೆ ಕಾರಣ ಏನೆಂದು ಇನ್ನು ಸ್ಪಷ್ಟವಾಗಿಲ್ಲ. ಸಾವನ್ನಪ್ಪಿದವರ ಗುರುತು ಇನ್ನು ಪತ್ತೆಯಾಗಬೇಕಿದೆ.
PublicNext
01/02/2021 09:59 am