ಬೆಳಗಾವಿ: ಜಿಲ್ಲೆಯ ರಾಯಬಾಗದ ಬಿರಡಿ ಗ್ರಾಮದ ಒಂದೇ ಕುಟುಂಬದ ನಾಲ್ವರು ಚಲಿಸುತ್ತಿರುವ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ.
ದಂಪತಿಯು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ನಗರದ ಒಂದನೇ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಪತಿ ರಾಕೇಶ್ ಪಾಟೀಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಕೇಶ್ ಅವರ ಪತ್ನಿ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯರು ಮತ್ತು ರೈಲ್ವೆ ಸಿಬ್ಬಂದಿಯ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರೈಲ್ವೆ ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
PublicNext
04/02/2021 01:32 pm