ಲಕ್ನೋ: ಸಂಬಂಧಿಯೊಬ್ಬರ ಅಂತ್ಯಕ್ರಿಯೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಜೀಪ್ ಒಂದಕ್ಕೆ ಟ್ರಕ್ ವಾಹನ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟು 11 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ- ಜೌನ್ ಪುರ ಹೆದ್ದಾರಿಯ ಜಲಾಲ್‌ಪುರ ಬಳಿ ನಡೆದಿದೆ.
ಅಮರ್ ಬಹದ್ದೂರ್ ಯಾದವ್(58), ರಾಮ್ ಸಿಂಗಾರ್ ಯಾದವ್ (38) ಕಮಲಾ ಪ್ರಸಾದ್ ಯಾದವ್ (60) ರಾಜ್ ಕುಮಾರ್(65), ಮುನ್ನಿಲಾಲ್ (38) ಹಾಗೂ ಇಂದ್ರಜಿತ್ ಯಾದವ್(48) ಮೃತ ದುರ್ದೈವಿಗಳು. ಇನ್ನು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್, ಜಲಾಲ್‌ಪುರ ನಿವಾಸಿಯಾದ ದಾಂಡೇ ದೇವಿ (112) ಅವರು ಮೃತಪಟ್ಟಿದ್ದರು. ಅವರ ಅಂತ್ಯ ಕ್ರಿಯೆಯನ್ನು ನೆರವೇರಿಸಲು ಅಳಿಯ ಲಕ್ಷ್ಮೀ ಶಂಕರ್ ಯಾದವ್ ಅವರನ್ನು ಒಳಗೊಂಡಂತೆ 17 ಜನರು ವಾರಣಾಸಿಯ ಮಣಿಕರ್ಣಿಕಾ ಘಾಟ್‌ಗೆ ತೆರಳಿದ್ದರು. ಅಲ್ಲಿಂದ ವಾಪಾಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆ ನಡೆದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಆದರೆ ಅಷ್ಟರಲ್ಲೇ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.
PublicNext
09/02/2021 09:41 pm