ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ- ವೈದ್ಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತದಲ್ಲಿ ಸಂಭವಿಸಿ ವೈದ್ಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಲಿಂಗರಾಜಪುರಂ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತಶ್ವಿಕ್ ಬುಷ್ರಾ ಮೃತ ದುರ್ದೈವಿ. ತಶ್ವಿಕ್ ಬುಷ್ರಾ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ತಶ್ವಿಕ್ ರಸ್ತೆ ಗುಂಡಿ ತಪ್ಪಿಸಲು ಯತ್ನಿಸಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ಬುಷ್ರಾರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟರಲ್ಲಿಯೇ ಮೃತಪಟ್ಟಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಲಾರಿ ಚಾಲಕ ಪಳನಿಯನ್ನು ಬಂಧಿಸಿದ್ದಾರೆ.

Edited By : Vijay Kumar
PublicNext

PublicNext

09/02/2021 10:46 pm

Cinque Terre

123.05 K

Cinque Terre

1

ಸಂಬಂಧಿತ ಸುದ್ದಿ