ಭೋಪಾಲ್: ಸೇತುವೆ ಮೇಲಿಂದ ಕಾಲುವೆಗೆ ಬಸ್ ಉರುಳಿಬಿದ್ದು, 16 ಮಹಿಳೆಯರು ಸೇರಿದಂತೆ 37 ಮಂದಿ ಸಾವನ್ನಪ್ಪಿದ ದುರ್ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರೆವಾ ವಲಯದ ಐಜಿಪಿ ಉಮೇಶ್ ಜೋಗಾ, ''ಬಸ್‌ನಲ್ಲಿ ಕನಿಷ್ಠ 50 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಉರುಳಿಬಿದ್ದಿದ್ದ ಬನ್‌ಸಾಗರ್ ಕಾಲುವೆಯಿಂದ 37 ಜನರ ಮೃತದೇಹವನ್ನು ಹೊರತೆಗೆಯಲಾಗಿದೆ. ಅದೃಷ್ಟವಶಾತ್ ಏಳು ಜನ ಈಜಿಕೊಂಡು ದಡ ಸೇರಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಒಂದು ಲಕ್ಷ ಮನೆಗಳನ್ನು ಹಸ್ತಾಂತರಿಸುವ ಸಮಾರಂಭ ಇಂದು ನಿಗದಿಯಾಗಿತ್ತು. ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್‌ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದರು. ಆದರೆ ದುರ್ಘಟನೆಯಿಂದಾಗಿ ಕಾಲುವೆಯಲ್ಲಿ ಕೊಚ್ಚಿ ಹೋದವರ ಹುಡುಕಾಟಕ್ಕೆ ರಾಜ್ಯ ಸರ್ಕಾರ ಸಮರೋಪಾದಿಯ ಕ್ರಮ ಕೈಗೊಂಡಿದೆ. ಹೀಗಾಗಿ ಅಮಿತ್ ಶಾ ಅವರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
PublicNext
16/02/2021 03:15 pm