ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಧ್ಯಪ್ರದೇಶದಲ್ಲಿ ಬಸ್ ದುರಂತ: ಸಾವಿನ ಸಂಖ್ಯೆ 47ಕ್ಕೆ ಏರಿಕೆ

ಭೋಪಾಲ್: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಸಂಭವಿಸಿದ ಬಸ್​ ದುರಂತದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಅಧಿಕಾರಿಗಳು, ಪತ್ತೆಯಾಗಿರುವ 47 ಮೃತದೇಹಗಳಲ್ಲಿ 24 ಪುರುಷರು 20 ಮಹಿಳೆಯರು ಹಾಗೂ ಮಕ್ಕಳು ಸೇರಿದ್ದಾರೆ. ಈ ಪೈಕಿ 42 ಮಂದಿಯ ಮೃತ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಆಗಿದ್ದೇನು?:

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಬೆಳಗ್ಗೆ 8 ಗಂಟೆ ಸುಮಾರಿಗೆ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿಕ ಸೇತುವೆ ಮೇಲಿಂದ ಕಾಲುವೆಗೆ ಬಿದ್ದಿತ್ತು. ಈ ಪೈಕಿ ಐವರು ಈಜಿ ಬದುಕುಳಿದಿದ್ದಾರೆ. ಆರಂಭದಲ್ಲಿ 16 ಮಹಿಳೆಯರು ಸೇರಿದಂತೆ 37 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿತ್ತು. ಈಗ ಸಾವಿನ ಸಂಖ್ಯೆ ಏರಿಕೆಯಾಗಿದೆ.

Edited By : Vijay Kumar
PublicNext

PublicNext

16/02/2021 09:55 pm

Cinque Terre

82.67 K

Cinque Terre

0