ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸೇರಿ 7 ಮಂದಿ ದುರ್ಮರಣ

ಲಕ್ನೋ: ಡೀಸೆಲ್ ಟ್ಯಾಂಕರ್ ಹಾಗೂ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸೇರಿ ಏಳು ಜನ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ 12.30ರ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ 7 ಜನರು ಹರಿಯಾಣದ ಜಿಂದ್ ಜಿಲ್ಲೆಯ ಸಫಿಡಾನ್ ಗ್ರಾಮದವರು. ಈ ಪೈಕಿ 4 ಜನರು ಒಂದೇ ಕುಟುಂಬಕ್ಕೆ ಸೇರಿದ್ದು, ಮನೋಜ್ (45), ಮನೋಜ್ ಅವರ ಪತ್ನಿ ಬಬಿತಾ (40), ಹಿರಿಯ ಮಗ ಅಭಯ್ (18), ಕಿರಿಯ ಮಗ ಹೇಮಂತ್ (16). ಇದಲ್ಲದೆ ಕಲ್ಲು (10), ಹಿಮಾಡ್ರಿ (14) ಮತ್ತು ಕಾರು ಚಾಲಕ ರಾಕೇಶ್ ಕೂಡ ಸಾವನ್ನಪ್ಪಿದ್ದಾರೆ.

ಈ ಭೀಕರ ಅಪಘಾತದಲ್ಲಿ ಕಾರು ಜಖಂಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Edited By : Vijay Kumar
PublicNext

PublicNext

24/02/2021 08:55 am

Cinque Terre

113.07 K

Cinque Terre

0

ಸಂಬಂಧಿತ ಸುದ್ದಿ