ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬಡೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪಾವಗಡ ತಾಲೂಕಿನ ಕರೇಕ್ಯಾತನಹಳ್ಳಿ ಗ್ರಾಮದ ಉಗ್ರಪ್ಪ (55) ಮತ್ತು ರಮೇಶ್ (40) ಮೃತ ದುರ್ದೈವಿಗಳು. ತೊಗರಿಗುಂಟೆ ಗ್ರಾಮದಿಂದ ಪಾವಗಡಕ್ಕೆ ಹುಣಸೆಹಣ್ಣು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
01/03/2021 11:45 am