ಲಕ್ನೋ: ಕೆಟ್ಟು ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 18 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯಲ್ಲಿ ನಡೆದಿದೆ.
ರಾಮ್‌ಸ್ನೇಹಿಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿದೆ. ಪಂಜಾಬ್ ಹಾಗೂ ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ತಮ್ಮ ಮನೆಗಳಿಗೆ ಪ್ರಯಾಣಿಸುತ್ತಿದ್ದರು. ಆದರೆ ಮಾರ್ಗಮಧ್ಯೆದಲ್ಲಿ ಬಸ್ ಕೆಟ್ಟು ನಿಂತಿದ್ದರಿಂದ ರಿಪೇರಿ ಮಾಡಲು ಹೆಚ್ಚು ಸಮಯ ಹಿಡಿಯುತ್ತದೆ ಎಂದು ಕೆಲವರು ಬಸ್‌ನಲ್ಲಿ, ಇನ್ನೂ ಕೆಲವರು ಕೆಳಗೆ ಹಾಗೂ ಬಸ್ ಪಕ್ಕದಲ್ಲಿ ನಿದ್ದೆಗೆ ಜಾರಿದ್ದರು.
ಈ ವೇಳೆ ವೇಗವಾಗಿ ಬಂದ ಟ್ರಕ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ 18 ಜನರು ಸಾವನ್ನಪ್ಪಿದ್ದರೆ, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಲಕ್ನೋದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
28/07/2021 07:59 am