ಲಕ್ನೋ: ಚಾಲಕನ ನಿಯಂತ್ರಣ ತಪ್ಪಿದ ಕಾರು ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಭೀಕರ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಅಕಾರ್‌ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಲಕ್ನೋದಿಂದ ಜಾರ್ಖಂಡ್ ರಾಷ್ಟ್ರೀಯ ಹೆದ್ದಾರಿ-28ರಲ್ಲಿ ಕಾರು ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದ ಏಳು ಜನರ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದಂತೆ ಚಾಲಕ ಮತ್ತು ಒಬ್ಬ ಬಾಲಕಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
PublicNext
12/08/2021 12:16 pm