ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಜಾನುವಾರು ಸಾಗಣೆ ವೇಳೆ ಅಪಘಾತ: 50ಕ್ಕೂ ಹೆಚ್ಚು ಕರುಗಳ ಸಾವು

ಹಾಸನ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ವಾಹನದಲ್ಲಿದ್ದ 50ಕ್ಕೂ ಹೆಚ್ಚು ಕರುಗಳು ಮೃತಪಟ್ಟಿವೆ. ಇನ್ನುಳಿದ ಕರುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ದ್ಯಾವಪ್ಪನಹಳ್ಳಿ ಗ್ರಾಮದ ಬಳಿ ರಾತ್ರಿ ನಡೆದಿದೆ. ಬಾಯಿ, ಕಾಲಿಗೆ ಹಗ್ಗ ಕಟ್ಟಿ ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು.

ಹಾಸನದಲ್ಲಿ 38 ಮಂಗಗಳ ಮಾರಣಹೋಮ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪುಟ್ಟ ಗೂಡ್ಸ್ ವಾಹನದಲ್ಲಿ 100 ಕರುಗಳ ಸಾಗಿಸಲಾಗುತ್ತಿತ್ತು. ಗೋಹತ್ಯೆ ನಿಷೇಧ ಇರುವುದರಿಂದ ದುಷ್ಟರು ರಾತ್ರೋ ರಾತ್ರಿ ಗೋವುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ.

Edited By : Nagaraj Tulugeri
PublicNext

PublicNext

19/08/2021 08:51 am

Cinque Terre

89.78 K

Cinque Terre

18

ಸಂಬಂಧಿತ ಸುದ್ದಿ