ಮಂಡ್ಯ: ಸವಾರ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ಬೈಕ್ ಹೊತ್ತಿ ಉರಿದ ಘಟನೆ ಜಿಲ್ಲೆ ನಾಗಮಂಗಲ ಪಟ್ಟಣದ ಟಿ.ಬಿ.ವೃತ್ತದಲ್ಲಿ ನಡೆದಿದೆ.
ಬೈಕ್ ನೆಲಕ್ಕೆ ಬೀಳುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ನಡು ರಸ್ತೆಯಲ್ಲೇ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಮಂಗಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
31/08/2021 10:46 pm