ಮಂಡ್ಯ: ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಆನಂದಕುಮಾರ್ (62), ಆರಾಧ್ಯ (10), ಗೌರವ್ (5) ಮೃತ ದುರ್ದೈವಿಗಳು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೋನಿಕಾ ಎಂಬುವವರ ಸ್ಥಿತಿ ಚಿಂತಾಜನಕವಾಗಿದೆ.
ಆನಂದಕುಮಾರ್, ಸ್ಕೂಟರ್ನಲ್ಲಿ ಸೊಸೆ ಮತ್ತು ಮೊಮ್ಮಕ್ಕಳನ್ನು ಕರೆದುಕೊಂಡು ಗುಡ್ಡೇನಹಳ್ಳಿಯಿಂದ ಹೊಣಕೆರೆಗೆ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
PublicNext
04/09/2021 11:05 pm