ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರು- ಟ್ರಕ್ ನಡುವೆ ಡಿಕ್ಕಿ: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 5 ಮಂದಿ ಸಾವು

ನವದೆಹಲಿ: ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಟ್ಟ ಕಂದಮ್ಮ ಸೇರಿ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಮಸೂರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಬ್ಬರು ದಂಪತಿಗಳು ಮತ್ತು ಮೂರು ಮಕ್ಕಳಿದ್ದ ಕಾರು ಉತ್ತರಾಖಂಡದ ಹರಿದ್ವಾರದಿಂದ ಗಾಜಿಯಾಬಾದ್‌ಗೆ ಹಿಂದಿರುಗುತ್ತಿತ್ತು. ಆದರೆ ಎಕ್ಸ್‌ಪ್ರೆಸ್‌ವೇಯಲ್ಲಿ ಒಟ್ಟು ಏಳು ಪ್ರಯಾಣಿಕರಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮಗು, ಇಬ್ಬರು ದಂಪತಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನುಳಿದ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Edited By : Vijay Kumar
PublicNext

PublicNext

07/09/2021 11:18 am

Cinque Terre

162.23 K

Cinque Terre

0

ಸಂಬಂಧಿತ ಸುದ್ದಿ