ಮಂಡ್ಯ: ಬಸ್ ಚಾಲನೆ ವೇಳೆಯೇ ಚಾಲಕನಿಗೆ ಲೋ ಬಿಪಿ ಕಾಣಿಸಿಕೊಂಡ ಪರಿಣಾಮ ಬಸ್ ಮೇಲಿನ ನಿಯಂತ್ರಣ ತಪ್ಪಿ ಬಸ್ ಕ್ಯಾಂಟರ್ಗೆ ಗುದ್ದಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಬಾಬುರಾಯನಕೊಪ್ಪಲು ಬಳಿ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಂಜುನಾಥ್ ಅವರಿಗೆ ಚಾಲನೆ ವೇಳೆ ಲೋ ಬಿಪಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ವೇಳೆ ಬಸ್ನ ಮೇಲಿನ ಸಂಪೂರ್ಣ ನಿಯಂತ್ರಣ ಕಳೆದುಕೊಂಡ ಚಾಲಕ ಮಂಜುನಾಥ್, ಕ್ಯಾಂಟರ್ಗೆ ಗುದ್ದಿದ್ದಾರೆ. ಅದೃಷ್ಟವಶಾತ್ ಚಾಲಕ ಮಂಜುನಾಥ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಬಿಟ್ಟರೆ, ಮಹಾ ದುರಂತವೊಂದು ತಪ್ಪಿದಂತಾಗಿದೆ.
ಅಪಘಾತ ಸಂಭವಿಸಿದ ಬಸ್ ನಂಜನಗೂಡು ಡಿಪೋಗೆ ಸೇರಿದೆ ಎನ್ನಲಾಗಿದ್ದು, ಮೈಸೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
PublicNext
12/09/2021 07:16 am