ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಲೇಬೈ ಮೇಲೆ ಇಂದು ರಾತ್ರಿ (ಸೆಪ್ಟಂಬರ್ 14) ರಾತ್ರಿ ನಿಂತಿದ್ದ ಯುವಕ- ಯುವತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ರಭಸಕ್ಕೆ ಫ್ಲೈ ಓವರ್ ಮೇಲೆ ಅಳವಡಿಸಿದ್ದ ಬ್ಯಾರಿಕೇಡ್ ಸಮೇತ ಯುವಕ ಹಾಗೂ ಯುವತಿ ಕೆಳಗೆ ಬಿದ್ದಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ದೇಹಗಳು ಛಿದ್ರವಾಗಿವೆ. ಕಾರಿನಲ್ಲಿದ್ದವರ ಪೈಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
PublicNext
14/09/2021 11:20 pm