ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರಿನಲ್ಲಿ ಸ್ಫೋಟ: ಜಮೀರ್ ಭರವಸೆ ಮೆಚ್ಚಿದ ಜನ

ಬೆಂಗಳೂರು: ನಗರದ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರ ದೇಹ ಛಿದ್ರ ಛಿದ್ರವಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಪಟಾಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ವೈಯಕ್ತಿಕವಾಗಿ 2 ಲಕ್ಷ ರೂ.ಗಳ ಪರಿಹಾರ ನೀಡುತ್ತೇನೆ. ಗಾಯಾಳುಗಳ ವೈದ್ಯಕೀಯ ಖರ್ಚನ್ನು ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ. ಗಾಯಾಳು ಮಂಜುನಾಥ್ ನನ್ನು ಬೃಂದಾವನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಲಿಕೆಯಿಂದ ಅನುಮತಿ ಪಡೆದೇ ಪಟಾಕಿ ಸ್ಟೋರೇಜ್ ಮಾಡಲಾಗಿದೆ.

ಈ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ಸ್ಥಳೀಯರೇ ಮೃತಪಟ್ಟಿದ್ದಾರೆ. 75 ವರ್ಷದ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ. ಕೆಲ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದರು. ಮೃತರನ್ನು ಅಸ್ಲಾಂ, ಫಯಾಜ್, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Edited By : Nirmala Aralikatti
PublicNext

PublicNext

23/09/2021 04:46 pm

Cinque Terre

86.86 K

Cinque Terre

4

ಸಂಬಂಧಿತ ಸುದ್ದಿ