ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಧಾನಿಯಲ್ಲಿ ಮತ್ತೊಂದು ಬೆಂಕಿ ಅವಘಡ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ನಿರಂತರವಾಗಿ ಅಗ್ನಿ ಅವಘಡಗಳು ನಡೆಯುತ್ತಿವೆ. ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ತಯಾರಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಪರಿಣಾಮ ಇಬ್ಬರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇಂದು ಮದ್ಯಾಹ್ನ ಈ ದುರ್ಘಟನೆ ನಡೆದಿದೆ. ಬಾಯ್ಲರ್ ಸ್ಪೋಟಗೊಂಡ ಕೆಲವೇ ಕ್ಷಣಗಳಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿತ್ತು‌. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Edited By : Nagaraj Tulugeri
PublicNext

PublicNext

24/09/2021 04:05 pm

Cinque Terre

156.1 K

Cinque Terre

0

ಸಂಬಂಧಿತ ಸುದ್ದಿ