ಬೆಂಗಳೂರು: ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತಕ್ಕೆ ಕಾರಣವಾಗಿದ್ದ ಉದ್ಯಮಿ ಪುತ್ರ ಜವೇರ್ ಮೇವಾನಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಶನಿವಾರ ರಾತ್ರಿ ದೊಮ್ಮಲೂರು ರಸ್ತೆಯಲ್ಲಿ ಅಪಘಾತವಾಗಿದೆ. ಪಾನಮತ್ತ ಚಾಲನೆ ಹಾಗೂ ಅಜಾಗರೂಕತೆಯಿಂದ ಚಾಲನೆ ಆರೋಪದಡಿ ಜವೇರ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಪಾನಮತ್ತನಾಗಿದ್ದ ಜವೇರ್, ಗಂಟೆಗೆ 100 ಕಿ.ಮೀ.ನಿಂದ 120 ಕಿ.ಮೀ ವೇಗದಲ್ಲಿ ಕಾರು ಚಲಾಯಿಸುತ್ತಿದ್ದ. ದೊಮ್ಮಲೂರು ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಕಾರು ಗುದ್ದಿಸಿದ್ದ. ನಂತರ, ರಸ್ತೆಯಲ್ಲಿ ಹೊರಟಿದ್ದ ಕ್ಯಾಬ್‌ಗೂ ಕಾರು ಡಿಕ್ಕಿ ಹೊಡೆಸಿದ್ದ. ಇದರಿಂದ ಕ್ಯಾಬ್ ಜಖಂಗೊಂಡಿತು. ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
27/09/2021 11:34 am