ಮೈಸೂರು: ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಮೈಸೂರು ಜಂಬೂ ಬಂಜಾರ್ ಬಳಿ ನಡೆದಿದೆ.
ಇಂದು ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಸಚಿವರಿದ್ದ ಸರ್ಕಾರಿ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯಗಳಾಗಿದೆ. ಆದರೆ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸದೇ ಸಚಿವರ ಕಾರಿನ ಮೇಲಿದ್ದ ಬಾವುಟ ತೆಗೆಯಲು ಮುಂದಾಗಿದ್ದರು ಎನ್ನಲಾಗಿದೆ. ಇದರಿಂದ ಸಚಿವರು ಹಾಗೂ ಕಾರು ಚಾಲಕನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ವಾಗ್ವಾದವನ್ನು ತಿಳಿಗೊಳಿಸಿ ತಮ್ಮ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
PublicNext
05/10/2021 10:56 pm