ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕಾರಿನ ಟೈರ್ ಸ್ಫೋಟಗೊಂಡು ಅಪಘಾತ; ತಾಯಿ-ಮಗ ದಾರುಣ ಸಾವು

ಮೈಸೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರೋಡ್‌ ಬಳಿ ನಡೆದಿದೆ.

ಗುಣಲಕ್ಷ್ಮಿ (35) ಹಾಗೂ ದೈವಿಕ್ (12) ಮೃತ ದುರ್ದೈವಿಗಳು. ಕಾರು ಚಾಲನೆ ಮಾಡುತ್ತಿದ್ದ ಗುಣಲಕ್ಷ್ಮಿ ಅವರ ಪತಿ ಜಗದೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂದು ಮುಂಜಾನೆ 4:30ರ ಸುಮಾರಿಗೆ ಘಟನೆ ನಡೆದಿದೆ.

ಜಗದೀಶ್ ಅವರು ಪತ್ನಿ, ಮಗನ ಜೊತೆಗೆ ಕಾರಿನಲ್ಲಿ ಹೊರಟಿದ್ದರು. ಈ ವೇಳೆ ಕಾರಿನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದಾಗಿ ಜಗದೀಶ್ ಅವರ ನಿಯಂತ್ರಣ ತಪ್ಪಿದ ಕಾರು ಕಂಬಕ್ಕೆ ಡಿಕ್ಕಿ ಗುದ್ದಿದೆ. ಈ ಸಂಬಂಧ ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

06/10/2021 01:12 pm

Cinque Terre

56.68 K

Cinque Terre

0

ಸಂಬಂಧಿತ ಸುದ್ದಿ