ಆನೇಕಲ್ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಪರಿಣಾಮ ಒಂದೇ ಕುಟುಂಬದ 7 ಜನ ಸೇರಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕರ್ನಾಟಕ ಗಡಿಭಾಗದ ಹೊಸೂರು ಪಟ್ಟಣದ ರಾಮನಗರದಲ್ಲಿ ನಡೆದಿದೆ.
ಭೀಮಸಿಂಗ್, ಅರವಿಂದ್, ರೂಬಿ, ಚಂದ್ರಾದೇವಿ, ಹೃತಿಕ್, ಸಬೀರ್ ಮತ್ತು ಸಾಧಿಕ್‌ಗೆ ಗಂಭೀರ ಗಾಯವಾಗಿದೆ. ಈ ಕುಟುಂಬವು ಉತ್ತರ ಪ್ರದೇಶದಿಂದ ಹೊಸೂರಿಗೆ ಬಂದು ಪಾನಿಪೂರಿ ವ್ಯಾಪಾರ ಮಾಡಿಕೊಂಡಿದ್ದತ್ತು. ಇಂದು ಬೆಳಗ್ಗೆ ಅಡುಗೆ ಮಾಡಲು ಗ್ಯಾಸ್ ಸ್ಟವ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯ ಮೇಲ್ಛಾವಣಿ ಹಾಗೂ ವಸ್ತುಗಳು ಛಿದ್ರ ಛಿದ್ರವಾಗಿವೆ. ಜೊತೆಗೆ ಅಕ್ಕಪಕ್ಕದ ಮನೆಯಲ್ಲಿ ಮತ್ತಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಈ ಸಂಬಂಧ ಹೊಸೂರು ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
06/10/2021 03:04 pm