ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ: ನಾಲ್ವರು ಮಕ್ಕಳು, 7 ಮಹಿಳೆಯರು ಸೇರಿ 11 ಜನ ದಾರುಣ ಸಾವು

ಲಕ್ನೋ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರು ಮಕ್ಕಳು, 7 ಮಹಿಳೆಯರು ಸೇರಿ 11 ಜನರು ಮೃತಪಟ್ಟಿರುವ ದುರ್ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಚಿರಗಾಂವ್ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಪುಷ್ಪ ದೇವಿ (40), ಮುನ್ನಿ ದೇವಿ (40), ಸುನಿತಾ ಬಾಯಿ (35), ಪೂಜಾ ದೇವಿ (25), ರಜ್ಜೋ ಬಾಯಿ (45), ಪ್ರೇಮವತಿ (50), ಕುಸುಮಾ (55), ಕೃಷ್ಣ (10), ಪರಿ (1), ಅನುಷ್ಕಾ (4) ಮತ್ತು ಅವಿ (2) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಝಾನ್ಸಿ ವೈದ್ಯಕೀಯ ಕಾಲೇಜು-ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸುಮಾರು 30 ಜನರು ವಿಜಯದಶಮಿ ಪ್ರಯುಕ್ತ ದೇವಿಯ ದರ್ಶನಕ್ಕೆಂದು ತೆರಳಿ ಹಿಂದಿರುಗುತ್ತಿದ್ದರು. ಈ ವೇಳೆ ದಾರಿಯಲ್ಲಿ ಜಾನುವಾರು ಅಡ್ಡ ಬಂದಿದ್ದು, ಅದನ್ನು ರಕ್ಷಿಸಲು ಹೋಗಿ ಚಾಲಕ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಜನರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Edited By : Vijay Kumar
PublicNext

PublicNext

15/10/2021 09:05 pm

Cinque Terre

130.54 K

Cinque Terre

2