ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಒಂದಿಲ್ಲೊಂದು ಭೀಕರ ಅಪಘಾತ ಸುದ್ದಿ ಆಗುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದ್ದು, ಮಡಿವಾಳದ ಸೆಂಟ್ ಜಾನ್ ಆಸ್ಪತ್ರೆ ಸಿಗ್ನಲ್ ಬಳಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾಗಿದೆ.
ಡಿವೈಡರ್‌ಗೆ ಗುದ್ದಿದ ರಭಸಕ್ಕೆ ಬಲೆನೊ ಕಾರಿನ ಮುಂಭಾಗ ನಜ್ಜುಗುಜ್ಜಾಗಿ ತುಂಡಾಗಿದ್ದು, ಟಯರ್ 30 ಮೀಟರ್ ದೂರಕ್ಕೆ ಹೋಗಿ ಬಿದ್ದಿದೆ. ಅದೃಷ್ಟವಶಾತ್ ಏರ್ ಬ್ಯಾಗ್ ತೆರೆದ ಪರಿಣಾಮ ಕಾರಿನ ಚಾಲಕ ಸೇರಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮದ್ಯದ ನಶೆಯಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಅಪಘಾತ ಎಸಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಡಿವಾಳ ಸಂಚಾರಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿ ಬಿಯರ್ ಬಾಟಲ್ ಪತ್ತೆಯಾಗಿದೆ. ವಿದ್ಯಾರ್ಥಿಗಳ ವಿರುದ್ಧ ಡ್ರಿಂಕ್ಸ್ ಆಂಡ್ ಡ್ರೈವ್ ಕೇಸ್ ಪ್ರಕರಣ ದಾಖಲಿಸಿದ್ದಾರೆ.
PublicNext
22/10/2021 08:43 am